ರಕ್ತದಾನಿಗಳಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ ಇಒ ಬೆಟದಪ್ಪ ಮಾಳೆಕೊಪ್ಪ
ನಮ್ಮೂರು ನ್ಯೂಸ್ ವರದಿ :
ಕುಕನೂರು ತಾಲೂಕಿನ : ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶ್ರೀ ಮಂಗಳೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತ ದಾನದ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಅರಳಲೆ ಹಿರೇಠ ಮಂಗಳೂರು ಅವರ ಷಟಸ್ಥಲ ಬ್ರಹ್ಮೆ ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಕನೂರು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೆಕೊಪ್ಪ, “ರಕ್ತದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ಒಬ್ಬ ವ್ಯಕ್ತಿ ನೀಡುವ ರಕ್ತವು ಅಗತ್ಯವಿರುವ ಹಲವಾರು ರೋಗಿಗಳ ಜೀವ ಉಳಿಸಲು ಸಹಕಾರಿಯಾಗುತ್ತದೆ. ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಹೇಳಿದರು.
ಶಿಬಿರದಲ್ಲಿ ರಕ್ತದಾನ ಮಾಡಿದ ದಾನಿಗಳಿಗೆ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೆಕೊಪ್ಪ ಅವರು ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ. ಸಿ.ಎಂ. ಹಿರೇಮಠ, ಆರ್.ಎ. ಸಿದ್ದಯ್ಯ, ಡಾ. ಅಮರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀಲಂ ಚಳಗೇರಿ, ಗ್ರಾಮ ಪಂಚಾಯತಿ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
📑... @✍️ ವರದಿ ವೀರಯ್ಯ ಹಿರೇಮಠ್